ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನ ವೃಂದದ ಸದಸ್ಯರಿಗೆ ವಂದನೆಗಳು.
ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾ ಭಗಿನಿಯರಿಗೆ ಮತ್ತು ಯುವಕ-ಯುವತಿಯರಿಗೆ ಕೃತಜ್ಞತೆಗಳು.
24-08-2020, ಸೋಮವಾರ ಬಲಿಪೂಜೆ ಸಂಜೆ 630ಕ್ಕೆ ಇರುವುದು.
ಬಲಿಪೂಜೆ ನಂತರ ಯುವಕ-ಯುವತಿಯರಿಗೆ ಸಭೆಇರುವುದು; ಯುವಕ-ಯುವತಿಯರು ತಪ್ಪದೆ ಭಾಗವಹಿಸುವಂತೆ ವಿನಂತಿಸುತ್ತೇನೆ.
ಬಲಿಪೂಜೆಯ ನಂತರ ವಿನ್ಸೆಂಟ್ ದಿಪೌಲ್ ಸಭೆ ನಡೆಯುವುದು. ದಯಮಾಡಿ ಸದಸ್ಯರು ತಪ್ಪದೆ ಭಾಗವಹಿಸಬೇಕೆಂದು ವಿನಂತಿಸುತ್ತೇನೆ.
ಬಲಿಪೂಜೆಯ ನಂತರ ಮರಿಯಮ್ಮನವರ ಸೈನ್ಯದ ಸಭೆ ನಡೆಯುವುದು. ದಯಮಾಡಿ ಸದಸ್ಯರು ತಪ್ಪದೆ ಭಾಗವಹಿಸಬೇಕೆಂದು ವಿನಂತಿಸುತ್ತೇನೆ.
ಬರುವ ಭಾನುವಾರ 20-09-2020, ಶಾಲೆಯ ಆವರಣವನ್ನು ಪೋಲಿಸ್ ಪರೀಕ್ಷೆಗಾಗಿ ವಶಪಡಿಸಿಕೊಳ್ಳುವುದರಿಂದ ಬಲಿಪೂಜೆ ಬೆಳಿಗ್ಗೆ 7-00 ಗಂಟೆಗೆ ಇರುವುದು. ದಯಮಾಡಿ ಸಹಕರಿಸಿಕೊಳ್ಳುವಂತೆ ಕೇಳಿಕೊಳ್ಳುತ್ತೇನೆ.