ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನ ವೃಂದದ ಸದಸ್ಯರಿಗೆ ವಂದನೆಗಳು.
ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾಭಗಿನಿಯರಿಗೆ, ಪಾಲನಾ ಸಮಿತಿ ಸದಸ್ಯರಿಗೆ ಮತ್ತು ಯುವಕ-ಯುವತಿಯರಿಗೆ ಕೃತಜ್ಞತೆಗಳು.
ಬಲಿಪೂಜೆ ನಂತರ ಯುವಕ–ಯುವತಿಯರಿಗೆ ಸಭೆಇರುವುದು; ಯುವಕ-ಯುವತಿಯರು ಭಾಗವಹಿಸುವಂತೆ ವಿನಂತಿಸುತ್ತೇನೆ.
ಬರುವ 09-01-2021, ತಿಂಗಳ ಎರಡನೇ ಶನಿವಾರ, ಹಿಂದಿನಂತೆ ನಮ್ಮ ಧರ್ಮಕೇಂದ್ರದ ಪಾಲಕಿ ಮಾತೆ ಮರಿಯಳ ಪ್ರತಿಮೆಯ ಮೆರವಣಿಗೆ,ನವೇನ ಪ್ರಾರ್ಥನೆ ಮತ್ತು ಬಲಿಪೂಜೆ ಸಂಜೆ 6-00 ಗಂಟೆಗೆ ಇರುತ್ತದೆ.
ಇಂದಿನ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಿದ ಪ್ರಿಸನ್ ಮಿನಿಸ್ಟ್ರಿ ತಂಡದ ಸದಸ್ಯರಿಗೆ ಮತ್ತು ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸುತ್ತೇನೆ.
ಬರುವ ಭಾನುವಾರ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಲು ವಿನ್ಸೆಂಟ್ ದೆ ಪೌಲ್ ಸಭೆಯ ಸದಸ್ಯರನ್ನು ಆಹ್ವಾನಿಸುತ್ತೇನೆ.