ಕೋರೊನಾ ವ್ಯಾಧಿಯ ವಿರುದ್ಧ ಪಾಲಿಸಬೇಕಾದ ಸೂಚನೆಗಳನ್ನು ದೇವಾಲಯದಲ್ಲಿ ಮಾತ್ರವಲ್ಲ ಎಲ್ಲೆಡೆಯಲ್ಲಿಯೂ ಪಾಲಿಸಿರಿ ಮತ್ತು ಪಾಲಿಸುವಂತೆ ಇತರರನ್ನು ಪ್ರೋತ್ಸಾಹಿಸಿರಿ.
ಬಲಿಪೂಜೆಯಲ್ಲಿ ಭಕ್ತಿಯಿಂದ ಹಾಡುತ್ತಾ ಭಾಗವಹಿಸಲು ಸಹಾಯ ಮಾಡಿದ ಗಾಯನ ವೃಂದದ ಸದಸ್ಯರಿಗೆ ವಂದನೆಗಳು.
ಬಲಿಪೂಜೆಗೆ ಎಲ್ಲಾ ವ್ಯವಸ್ಥೆ ಮಾಡಿದ ಕನ್ಯಾಭಗಿನಿಯರಿಗೆ, ಪಾಲನಾ ಸಮಿತಿ ಸದಸ್ಯರಿಗೆ ಮತ್ತು ಯುವಕ-ಯುವತಿಯರಿಗೆ ಕೃತಜ್ಞತೆಗಳು.
ಬಲಿಪೂಜೆ ನಂತರ ಮರಿಯಮ್ಮನವರ ಸೈನ್ಯದ ಸಭೆ ಮತ್ತುಯುವಕ–ಯುವತಿಯರಿಗೆ ಸಭೆಇರುವುದು; ಸದಸ್ಯರು ಭಾಗವಹಿಸುವಂತೆ ವಿನಂತಿಸುತ್ತೇನೆ.
05-02-2021, ಶುಕ್ರವಾರ, ತಿಂಗಳ ಮೊದಲನೆ ಶುಕ್ರವಾರ, ಮನೆಯಲ್ಲಿ ವೃದ್ದರು, ಅಸ್ವಸ್ಥರು ಅಥವಾ ಪರಮಪ್ರಸಾದ ಸ್ವೀಕರಿಸುವವರು ಇದ್ದಲ್ಲಿ ಅವರಿಗೆ ಪರಮಪ್ರಸಾದವನ್ನು ತರಲಾಗುವುದು. ದಯಮಾಡಿ ತಿಳಿಸಿ.
ಇಂದಿನ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಿದ ಕಾರ್ಮೆಲ್ ಅಸೋಸಿಯೇಟ್ಸ್ ಸದಸ್ಯರಿಗೂ ಧನ್ಯವಾದಗಳನ್ನು ಸಮರ್ಪಿಸುತ್ತೇನೆ.
ಬರುವ ಭಾನುವಾರ ಬಲಿಪೂಜಾರಾಧನಾ ವಿಧಿಗೆ ಸಹಾಯ ಮಾಡಲು ಕಾರ್ಮೆಲ್ ಕಾನ್ವೆಂಟ್ನ ಸಿಸ್ಟರ್ಸ್ಗಳನ್ನು ಆಹ್ವಾನಿಸುತ್ತೇನೆ.